BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಲೇಖಕಿ ‘ಬಾನು ಮುಷ್ತಾಕ್’ ಉದ್ಘಾಟನೆ: CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಸ್ತಕ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿಸಿದರು.