ಬೆಂಗಳೂರು: ಕಿಯೋನಿಕ್ಸ್, ಎಂ ಎಸ್ ಐ ಎಲ್ ಸೇರಿದಂತೆ ಆರು ನಿಗಮ-ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆವಾರು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ನಿಗಮ ಮಂಡಳಿಯ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಆಧಾರದಲ್ಲಿ 725 ಹುದ್ದೆವಾರು ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 41 ಹುದ್ದೆ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ 386 ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ 186 ಹುದ್ದೆ, ಎಂಎಸ್ಐಎಲ್ 72 ಹುದ್ದೆ, ಕಿಯೋನಿಕ್ಸ್ 26 ಹುದ್ದೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಹುದ್ದೆ ಸೇರಿದಂತೆ ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.
ಇನ್ನೂ ಅಭ್ಯರ್ಥಿಗಳು ತಾತ್ಕಾಲಿಕ ಅಂಕಪಟ್ಟಿಯ ಬಗ್ಗೆ ಏಪ್ರಿಲ್.29ರ ಒಳಗಾಗಿ ಇಮೇಲ್ ಮೂಲಕ kea2023exam@gmail.com ಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
ಚುನಾವಣೆ ಹೊತ್ತಲ್ಲೇ ‘ಬಿಜೆಪಿ’ಗೆ ಬಿಗ್ ಶಾಕ್: ‘2 ಕೋಟಿ ಹಣ’ ಜಪ್ತಿ, ಮೂವರ ವಿರುದ್ಧ ‘FIR’ ದಾಖಲು
ಮತದಾರರ ಗಮನಕ್ಕೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ