Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

​ಹೃದಯಾಘಾತದ ಅಪಾಯ: ನಿಮ್ಮ ದೇಹ ನೀಡುವ ಈ 7 ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ | Heart Attack

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೂತನ ವಿವಿ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ಕೇಂದ್ರದಿಂದ ಹಣ ಕೊಡಿಸಲಿ: ಡಿಸಿಎಂ ಡಿಕೆಶಿ
KARNATAKA

ನೂತನ ವಿವಿ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ಕೇಂದ್ರದಿಂದ ಹಣ ಕೊಡಿಸಲಿ: ಡಿಸಿಎಂ ಡಿಕೆಶಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: “ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರು ವಿವಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ನೂತನ 9 ವಿವಿಗಳ ಮುಚ್ಚುವ ಬಗ್ಗೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ ಎಂದು ಕೇಳಿದಾಗ, “ಯಾವುದೇ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈ ವಿವಿಗಳಿಗಾಗಿ ಬಿಜೆಪಿ ಸರ್ಕಾರ ಕೇವಲ 2 ಕೋಟಿ ಹಣವಿಟ್ಟಿತ್ತು. 2 ಕೋಟಿ ಹಣದಲ್ಲಿ ವಿವಿ ಸ್ಥಾಪನೆ ಮಾಡಲು ಆಗುವುದಿಲ್ಲ. ಇದಕ್ಕೆ ನೂರಾರು ಎಕರೆ ಜಾಗ ಬೇಕು. ಬೆಂಗಳೂರು ವಿವಿ ಮಾಡುವಾಗ ಹೇಗೆ 1,200 ಎಕರೆ ಜಮೀನು ಇಟ್ಟು ಸ್ಥಾಪಿಸಿದ್ದರೋ, ಅದೇ ರೀತಿ ಇದರಲ್ಲಿ ಅರ್ಧದಷ್ಟು ಜಾಗವನ್ನಾದರೂ ಮೀಸಲಿಡಬೇಕು” ಎಂದು ತಿಳಿಸಿದರು.

“ಕೇವಲ ಹೆಸರಿಗಾಗಿ ವಿವಿ ಮಾಡಲು ಆಗುವುದಿಲ್ಲ. 20-30 ಕಾಲೇಜುಗಳಿಗೆ ಒಂದು ವಿವಿ ಮಾಡಲು ಸಾಧ್ಯವಿಲ್ಲ. ವಿಸಿ ಹುದ್ದೆಗಾಗಿ ವಿವಿ ಮಾಡಲು ಆಗುವುದಿಲ್ಲ. ಈ ಹಿಂದೆ ಈ ಪ್ರಯತ್ನ ಮಾಡಲಾಗಿತ್ತು. ಮಂಡ್ಯ, ಕೊಡಗು ಭಾಗದ ಅನೇಕ ವಿದ್ಯಾರ್ಥಿಗಳು ನಮಗೆ ಮೈಸೂರು ವಿವಿಯ ಹೆಸರಿನಲ್ಲೇ ಓದಬೇಕು ಡಾ.ರಾಧಾಕೃಷ್ಣ, ಕುವೆಂಪು ಅವರಿದ್ದ ಮೈಸೂರು ವಿವಿಯಲ್ಲಿ ಓದಿದರೆ ನಮಗೂ ಬಹಳ ಗೌರವವಿರುತ್ತದೆ ಎಂದು ಮನವಿ ಮಾಡಿದ್ದಾರೆ. ಇನ್ನು ಸಿಬ್ಬಂದಿಗಳು ತಮ್ಮ ಹಿರಿತನ ವ್ಯರ್ಥವಾಗುತ್ತದೆ ಎಂದು ನೂತನ ವಿವಿಗೆ ಆಗಮಿಸಲು ಮುಂದಾಗುತ್ತಿಲ್ಲ” ಎಂದು ಹೇಳಿದರು.

“ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿತ್ತು. ಇದಕ್ಕಾಗಿ ಸಚಿವ ಸಂಪುಟ ಉಪ ಸಮಿತಿ ಮಾಡಲಾಗಿತ್ತು. ಈ ಸಮಿತಿಯಲ್ಲಿ ನಾನು ಇದ್ದು ಚರ್ಚೆ ಮಾಡಿದ್ದೇನೆ. ಕೆಲವರು ರಾಜಕೀಯವಾಗಿ ಹೋರಾಟ ಮಾಡಬಹುದು. ನಮಗೆ ಮಕ್ಕಳ ವಿದ್ಯಾಭ್ಯಾಸ ಮುಖ್ಯ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ಈ ವಿಚಾರವಾಗಿ ಇನ್ನು ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ. ಪ್ರತಿಭಟನೆ ಮಾಡುವವರು ಮಾಡುತ್ತಿರುತ್ತಾರೆ. ವಿವಿ ಮಾಡಿದ್ದೇವೆ ಎಂದು ಹೇಳುತ್ತಿರುವವರು ಆ ವಿವಿಗೆ ಎಷ್ಟು ಹಣ ನೀಡಿದ್ದರು ಎಂದು ಹೇಳಬೇಕಲ್ಲವೇ? 2 ಕೋಟಿಯಲ್ಲಿ ವಿವಿ ಮಾಡಲು ಸಾಧ್ಯವೇ? ಆ 2 ಕೋಟಿಯೂ ಬಿಡುಗಡೆಯಾಗಿಲ್ಲ. ಪ್ರತಿಭಟನೆ ಮಾಡುತ್ತಿರುವವರು ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ತಂದು ಕೊಟ್ಟರೆ ಅಗತ್ಯವಿರುವ ಜಾಗ ಖರೀದಿ ಮಾಡಿ ವಿವಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬಹುದು” ಎಂದು ತಿಳಿಸಿದರು.

ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ, ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ: ಡಿಕೆಶಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗಮನಕ್ಕೆ: ಶುಲ್ಕ ವಿನಾಯ್ತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

2 Mins Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: `ಉಚಿತ ಬಸ್ ಪಾಸ್’ ಯೋಜನೆಗೆ ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್.!

2 Mins Read
Recent News

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

​ಹೃದಯಾಘಾತದ ಅಪಾಯ: ನಿಮ್ಮ ದೇಹ ನೀಡುವ ಈ 7 ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ | Heart Attack

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

​ಪಾಕಿಸ್ತಾನ: ಫ್ರೆಂಚ್ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದ ಆರೋಪಿಗಳಿಗೆ ಮರಣದಂಡನೆ ಎತ್ತಿ ಹಿಡಿದ ಹೈಕೋರ್ಟ್!

State News
KARNATAKA

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ನೈಋತ್ಯ ಮುಂಗಾರು (Monsoon) ಜೂನ್ 4 ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಿದೆ.…

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: `ಉಚಿತ ಬಸ್ ಪಾಸ್’ ಯೋಜನೆಗೆ ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್.!

BIG NEWS : ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.