ಬೆಂಗಳೂರು : ಕಳೆದ ಒಂದು ತಿಂಗಳಿನಲ್ಲಿ ಬೆಂಗಳೂರಿನ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಗಳು ನಡೆದಿವೆ. ಹಾಗಾಗಿ BMTC ಸಿಬ್ಬಂದಿ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡ್ರೈವರ್, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗುವ ರೀತಿಯಲ್ಲಿ ಮಾಡಬೇಕು. ಜೈಲಿಗೆ ಹೋಗುವ ರೀತಿ ಮಾಡಬೇಕು, ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಹೇಳಿದ್ದಾರೆ.
ಇನ್ನು ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.