Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ
KARNATAKA

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳು, ಪಿಂಚಣಿ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸದ್ಯದಲ್ಲೇ ಆರಂಭವಾಗಲಿರುವ ಕೇಂದ್ರ ಸರ್ಕಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಎಸ್‌ಆರ್‌) ಪ್ರಕ್ರಿಯೆಯ ಕುರಿತು ಅವರು ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.ಎಸ್‌ ಐ ಆರ್‌ ವೇಳೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯ್ತಿಗೆ ಖುದ್ದಾಗಿ ಹೋಗಿ ಮತದಾರರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.ಮತದಾನದ ಹಕ್ಕು ಪಡೆಯಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳೇ ಜನರಿಗೆ ಒದಗಿಸಬೇಕು. ಯಾರೇ ಆಗಲಿ ತಮ್ಮ ಊರಿನಿಂದ ಹೊರಗೆ ಕೆಲಸ ಮಾಡುತ್ತಿದ್ದರೆ, ಅವರ ದಾಖಲೆಗಳನ್ನು ಸಂಗ್ರಹಿಸಿ ಮತದಾನದ ಹಕ್ಕಿಗೆ ಅರ್ಜಿ ಸಲ್ಲಿಸಬೇಕು. ವಾಸಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಒದಗಿಸಬೇಕು ಎಂದು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಪ್ರತಿ ತಾಲೂಕಿಗೆ ಭೇಟಿ ನೀಡಿ ಬಿಎಲ್‌ಒ (BLO) ಗಳಿಗೆ ಮಾರ್ಗದರ್ಶನ ನೀಡಬೇಕು ಹಾಗೂ ಎಲ್ಲಾ ಪಕ್ಷಗಳ ಬಿಎಲ್‌ ಒಗಳ ಜೊತೆ ಸಂಪರ್ಕದಲ್ಲಿರಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ 964 ಶಾಲೆಗಳಲ್ಲಿ ಶೂನ್ಯ ದಾಖಲಾತಿ (ಒಬ್ಬನೇ ವಿದ್ಯಾರ್ಥಿಯೂ ಇಲ್ಲದಿರುವುದು) ಇದೆ. ಇಂತಹ ಶಾಲೆಗಳನ್ನು ಬೇರೆ ಶಾಲೆಗಳ ಜೊತೆ ಕ್ಲಬ್ ಮಾಡಬೇಕೇ ಅಥವಾ ಮುಚ್ಚಬೇಕೇ ಎಂಬ ಬಗ್ಗೆ ಮುಂದಿನ ಸಚಿವ ಸಂಪುಟ (Cabinet) ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

1 ತಿಂಗಳಲ್ಲಿ ಮಕ್ಕಳಿಗೆ ಸಮವಸ್ತ್ರ, ಶೂ ವಿತರಣೆಗೆ ಗಡುವು

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕರೆತರುವಂತೆ ಮಾಡಬೇಕು. ಶಾಲಾ ಮಕ್ಕಳಿಗೆ ಕೇವಲ ಒಂದು ತಿಂಗಳ ಒಳಗಾಗಿ ಸಮವಸ್ತ್ರ (Uniform), ಶೂ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತ ನಮ್ಮ ಸರ್ಕಾರದ ಸಂಕಲ್ಪ

ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳು‌ ಹಾಗೂ ಈ ನಿಮಿತ್ತ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಪ್ರಮುಖ ವಿಚಾರಗಳು:

• ಟೀಮ್ ಕರ್ನಾಟಕ: ನಾವೆಲ್ಲರೂ… pic.twitter.com/ROgCtbO99V

— DK Shivakumar (@DKShivakumar) June 13, 2026

Those who do not have voting rights in the state will not get 'guaranteed' facilities: CM D.K. Shivakumar warns
Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

1 Min Read

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

2 Mins Read

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

1 Min Read
Recent News

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

State News
KARNATAKA

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

By kannadanewsnow57 KARNATAKA 1 Min Read

ಬೆಂಗಳೂರು: 2026-27ನೇ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ನಿಗದಿತ ಅವಧಿಯೊಳಗೆ ಪಾವತಿಸುವ ಸಾರ್ವಜನಿಕರಿಗೆ ಸರ್ಕಾರವು ವಿಶೇಷ ರಿಯಾಯಿತಿಯೊಂದನ್ನು ಘೋಷಿಸಿದೆ. ತೆರಿಗೆದಾರರು…

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.