ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ನಿನ್ನೆ ಕೇರಳದ ಗಡಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದಂತ ರಾಜೀವ್ ಗೌಡ ಹಾಗೂ ಅವರಿಗೆ ಆಶ್ರಯ ನೀಡಿದ್ದಂತ ಉದ್ಯಮಿ ಮೈಕಲ್ ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯವು, ಆರೋಪಿ ರಾಜೀವ್ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆರೋಪಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದಂತ ಮೈಕಲ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.








