ಮಂಗಳೂರು: ಜಿಲ್ಲೆಯ ತುಳುನಾಡಿನ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಘಟನೆ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತುಳುನಾಡಿನ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು ಕೊಂಡಾಣ ಪಿಲಿಚಾಮುಂಡಿ ದೇವಸ್ಥಾನ. ಈ ದೇವಸ್ಥಾನವನ್ನು ಬಣ ಸಂಘರ್ಷದ ಕಾರಣದಿಂದಾಗಿ ರಾತ್ರೋ ರಾತ್ರಿ ಜೆಸಿಬಿ ಬಳಸಿ ಕೆಡವಲಾಗಿತ್ತು.

ಈ ನಿರ್ಮಾಣ ಹಂತದ ದೇವಸ್ಥಾನವನ್ನು ಕೆಡವಿದ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯ್ತಿಯ ಮುಖ್ಯಾಧಿಕಾರಿ ಆನಂದ್ ಎಂಬುವರು ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಂದು ಉಳ್ಳಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಎಂಬುದಾಗಿ ಗುರುತಿಸಲಾಗಿದೆ. ಇದೀಗ ಅವರನ್ನು ಬಂಧಿಸಿ, ಘಟನೆ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ.

BREAKING: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಮಾಜಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್!

WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್‌ಮ್ಯಾನ್‌ ರೋಹಿತ್‌ ನಾಯಕತ್ವಕ್ಕೆ ಮೆಚ್ಚುಗೆ!

Share.
Exit mobile version