ಹಾಸನ: ಬೆಂಗಳೂರು, ಶಿವಮೊಗ್ಗದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮುಂದುವರೆದು ಹಾಸನದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಮೂವರು ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸನದ ಗದ್ದೆಹಳ್ಳದಲ್ಲಿ ಪಶ್ಚಿಮ ಬಂಗಾಳದ ವಿಳಾಸವನ್ನು ಹೊಂದಿದ್ದಂತ ಆಧಾರ್ ಕಾರ್ಡ್ ನೋಂದಿಗೆ ಮೂವರು ಬಾಂಗ್ಲಾ ಪ್ರಜೆಗಳು ವಾಸವಾಗಿದ್ದರು. ಈ ಮಾಹಿತಿ ತಿಳಿದಂತ ಪೊಲೀಸರು ಮನೆ ನಿರ್ಮಾಣ ಕೆಲಸದಲ್ಲಿ ತೊಡಗುದ್ದಂತ ಫಾರೂಕ್ ಆಲಿ, ಅಕ್ಮಲ್ ಹೊಕ್ಕು, ಜಮಾಲ್ ಆಲಿ ಎಂಬುವರನ್ನು ಬಂಧಿಸಿದ್ದಾರೆ.
ಬಂಧಿತ ಬಾಗ್ಲಾ ಪ್ರಜೆಗಳು ಅಕ್ರಮವಾಗಿ ಜುಬೇರ್ ಎಂಬುವರ ಮನೆಯಲ್ಲಿ ವಾಸವಾಗಿದ್ದರು. ಅವರ ಬಳಿಯಲ್ಲಿ ಪಶ್ಚಿಮ ಬಂಗಾಳದ ವಿಳಾಸವಿರುವಂತ ಆಧಾರ್ ಕಾರ್ಡ್ ಪತ್ತೆಯಾಗಿದೆ. ಈ ಸಂಬಂಧ ಮೂವರು ಅಕ್ರಮ ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
SHOCKING : ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಬಿದ್ದು ಯುವಕ ದುರಂತ ಸಾವು! Video Viral







