ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೊರೆತಿತ್ತು. ಈ ಮಾಹಿತಿ ಆಧರಿಸಿ ದಾಳಿ ಮಾಡಿದ್ದಾರೆ. ಈ ವೇಳೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದಂತ ಮೂವರು ಪರಾರಿಯಾಗಿದ್ದಾರೆ.
ಸ್ಥಳದಲ್ಲಿದ್ದಂತ ನಾಲ್ಕೂವರೆ ಕೆಜಿ ಕಾಡುಹಂದಿ ಮಾಂಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಭಾಕರ್, ಗಣಪತಿ ಮತ್ತು ಅಣ್ಣಪ್ಪ ಎಂಬುವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಅಂದಹಾಗೇ ಈ ಕಾರ್ಯಾಚರಣೆಯನ್ನು ಸಾಗರ-ಸೊರಬ ತಾಲ್ಲೂಕು ಡಿಎಫ್ಓ ಮೋಹನ್ ಕುಮಾರ್ ಹಾಗೂ ಎಸಿಎಫ್ ಮಾರ್ಗದಲ್ಲಿ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ಉಪ ವಲಯ ಅರಣ್ಯಾಧಿಕಾರಿ ಕಿರಣ್, ಸಿಬ್ಬಂದಿಗಳಾದಂತ ಸುರೇಶ್, ಬಸವರಾಜ್, ಸುನೀತಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING : ಧಾರವಾಡದಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!