ಯಾದಗಿರಿ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾದಗಿರಿಯ ಸುರಪುರ ತಾಲ್ಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಂತ ದೇವಿಕೆಮ್ಮ ಹೊಟ್ಟಿ, ವೆಂಕಮ್ಮ, ರಾಮಣ್ಣ ಪೂಜಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 10 ದಿನಗಳ ಹಿಂದೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇನ್ನೂ ತಿಪ್ಪನಟಗಿ ಗ್ರಾಮದಲ್ಲಿ 20ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿದ್ದರಿಂದ ಅಸ್ಪಸ್ಥರಾಗಿದ್ದರೇ, 6 ಮಂದಿ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
BREAKING: ಮಂಗಳೂರಲ್ಲಿ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ 15 ಲಕ್ಷ ವೈಯಕ್ತಿಕವಾಗಿ ಪರಿಹಾರ ವಿತರಿಸಿದ ಜಮೀರ್, ಖಾದರ್