ಗದಗ: ಜಿಲ್ಲೆಯಲ್ಲಿ ಇಂದು ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಈ ಅಪಘಾತದಲ್ಲಿ ಲಾರಿ, ಸರ್ಕಾರಿ ಬಸ್ ನಜ್ಜುಗುಜ್ಜಾಗಿರೋದಾಗಿ ತಿಳಿದು ಬಂದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ಇಂದು ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿರೋದಾಗಿ ಶಂಕೆ ವ್ಯಕ್ತವಾಗಿದೆ.
ಇನ್ನೂ ಈ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ, ಜೆಡಿಎಸ್ ನಲ್ಲಿ ನಾಯಕತ್ವ ಹಾಗೂ ಆತ್ಮ ವಿಶ್ವಾಸದ ಕೊರತೆ ಇದೆ- ಡಿಸಿಎಂ ಡಿ.ಕೆ. ಶಿವಕುಮಾರ್