ಹಾಸನ: ಜಿಲ್ಲೆ ಸಕಲೇಶಪುರ, ಬೇಲೂರು ಸುತ್ತಮುತ್ತ ಜನರಿಗೆ ತೀವ್ರ ಉಪಟಳ ನೀಡುತ್ತಿದ್ದ ಆನೆಗಳನ್ನು ಹಿಡಿಯಲು ಮಾ.16ರಿಂದ ಕಾರ್ಯಾಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಇಂದು ಹೆಬ್ಬನಹಳ್ಳಿ ಗ್ರಾಮದ ಬಳಿ 3ನೆ ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದೆ. ಇದರೊಂದಿಗೆ ಕಳೆದ ಒಂದು ವಾರದಲ್ಲಿ ಒಟ್ಟು 3 ಆನೆ ಸೆರೆ ಹಿಡಿದಂತಾಗಿದ್ದು, ಈ ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಾಣದ ಹಂಗು ತೊರೆದು ಪುಂಡಾನೆಗಳ ಸೆರೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಮಾವುತರು, ಪಶುವೈದ್ಯರು, ಮುಂಚೂಣಿ ಕಾರ್ಯಕರ್ತರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ. ಮಾನವ-ಆನೆ ಸಂಘರ್ಷ ನಿಯಂತ್ರಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
BIG NEWS: ಶೀಘ್ರವೇ ರಾಜ್ಯದಲ್ಲಿ ‘6ನೇ ಗ್ಯಾರಂಟಿ’ ಜಾರಿ: ಯಾರಿಗೆ ಗೊತ್ತಾ? | Guarantee Scheme