ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಶಾಲೆಯ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಪ್ರಾರ್ಥನೆ ಮುಗಿಸಿ ಶಾಲೆಯೊಳಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ಮಾಡಿದೆ.
ಶಾಲೆಯ ಸುಮಾರು 15 ಮಕ್ಕಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಜ್ಜೆನು ದಾಳಿ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ.