ಬೆಂಗಳೂರು: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಆ ಬಳಿಕ ಬೆಂಕಿ ಕಾಣಿಸಿಕೊಂಡಿತ್ತು. ಈ ಅಗ್ನಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮನುರುಲ್ ಶೇಖ್, ಜಾವಿದ್ ಆಲಿ ಹಾಗೂ ತಜ್ ಬುಲ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಕ್ಟೋಬರ್.7ರಂದು ಭೀಮನಹಳ್ಳಿ ಬಳಿಯ ಶೆಡ್ ನಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿ ಇದಾಗಿದೆ.
ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.
BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ಮಂಡ್ಯದಲ್ಲಿ ಕುಂಭದ್ರೋಣ ಮಳೆಗೆ ಪೋಲೀಸ್ ಠಾಣೆ, 10ಕ್ಕೂ ಹೆಚ್ಚು ಮನೆಗಳಿಗೆ ‘ಜಲ ದಿಗ್ಬಂಧನ’