ಮಹಾರಾಷ್ಟ್ರ (ಪಾಲ್ಘರ್): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿನ ಕೈಗಾರಿಕಾ ಘಟಕದಲ್ಲಿ ಹೈಡ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಎಂಟು ಮಂದಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ ಘಟನೆ ನಡೆದಿದೆ.
ಚಂದರಪದ ಪ್ರದೇಶದ ವಿದ್ಯುತ್ ಉಪಕರಣಗಳ ತಯಾರಿಕಾ ಕಂಪನಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Maharashtra | Three people dead, eight seriously injured in the fire due to boiler explosion at a factory in Vasai area of Palghar district, says the Fire Dept.
— ANI (@ANI) September 28, 2022
ಮೂರು ಕಾರ್ಮಿಕರು ಗುರುತಿಸಲಾಗದಷ್ಟು ಸುಟ್ಟಿದ್ದಾರೆ. ಎಂಟು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದರು.