ಮಧ್ಯಪ್ರದೇಶ : ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಳ್ಳಿಯೊಂದರ ಬಳಿ ಮೋಟಾರ್ ಸೈಕಲ್ಗೆ ಡಂಪರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ತೆಂಡುಖೇಡ ಪೊಲೀಸ್ ವ್ಯಾಪ್ತಿಯಲ್ಲಿ ಮೋಟಾರ್ ಬೈಕ್ಗೆ ಡಂಪರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗುರುವಾರ ರಾತ್ರಿ ಪಜಿ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರೋಹಿತ್ ನಾಮದೇವ್ (22), ಸುನಿಲ್ ಸೇನ್ (35) ಮತ್ತು ರಾಮಭರೋಸ್ ಪಾಟ್ಕರ್ (35) ಎಂದು ಗುರುತಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಶಿವಕುಮಾರ್ ಸಿಂಗ್ ತಿಳಿಸಿದ್ದಾರೆ.
ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ಅಪಘಾತದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.