ಗದಗ: ಜಿಲ್ಲೆಯಲ್ಲಿ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದೆ. ಈ ಕ್ಯಾಂಟರ್ ನಲ್ಲಿದ್ದಂತ ನವೀನ್ ಕುಂಬಾರ್(23) ಸ್ಥಳದಲ್ಲೇ ಸಾವನ್ನಪ್ಪಿದ್ರೇ, ನಾಗಪ್ಪ ಕಾಳಿ(23) ಹಾಗೂ ಗಂಗಪ್ಪ (22) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕ್ಯಾಂಟರ್ ಚಾಲಕನ ಅತಿವೇಗದ ಚಾಲನೇಯೇ ಈ ಅಪಘಾತಕ್ಕೆ ಕಾರಣ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ