ರಾಯಚೂರು: ಜಿಲ್ಲೆಯಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ದುರ್ಮರಣಹೊಂದಿರುವಂತ ಘಟನೆ ನಡೆಡಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿರೋದಾಗಿ ತಿಳಿದು ಬಂದಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಕಲ್ಲೂರು ಬಳಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಲಾರಿಯೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎಂಬುದಾಗಿ ಮಾಹಿತಿಯಿಂದ ತಿಳಿದು ಬಂದಿದೆ. ಮಾನ್ವಿಯಿಂದ ರಾಯಚೂರಿಗೆ ಕಾರು ಹೊರಟಿದ್ದರೇ, ಲಾರಿ ರಾಯಚೂರಿನಿಂದ ಮಾನ್ವಿಗೆ ತೆರಳುತ್ತಿತ್ತು.
ಲಾರಿ ಕಾರಿಗೆ ಡಿಕ್ಕಿಯಾದ ಬಳಿಕ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಸಿರಿವಾರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್