ಚಿಕ್ಕಬಳ್ಳಾಪುರದಲ್ಲಿ ಟಿಟಿ ವಾಹನ ಕಾರಿನ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿ ಬಳಿಯಲ್ಲಿ ಟಿಟಿ ವಾಹನ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿಯಲ್ಲಿ ಟಿಟಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಶ್ರೀನಿವಾಸಲು(50), ಪುಷ್ಪ (14) ಹಾಗೂ ಶ್ರೀಕಾಂತ್ (30) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಬೆಂಗಳೂರಿನಿಂದ ಆಂಧ್ರಪ್ರದೇಶದ … Continue reading ಚಿಕ್ಕಬಳ್ಳಾಪುರದಲ್ಲಿ ಟಿಟಿ ವಾಹನ ಕಾರಿನ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು