ನರಗುಂದ: ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಹಿಂಬದಿಯಲ್ಲಿ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನರಗುಂದದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪರಿಚಿತ ವಾಹನವೊಂದು ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಿಂಗಪ್ಪ ಮಾದರ, ಯಮನಪ್ಪ ಹಾಗೂ ಮಂಜುನಾಥಗೌಡ ಎಂಬುವರು ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನದ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
‘ಸಾಗರ ಗ್ರಾಮಾಂತರ ಠಾಣೆ’ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯಲ್ಲೇ ‘ಸರಗಳ್ಳ ಅರೆಸ್ಟ್’