ಯಾದಗಿರಿ: ಜಿಲ್ಲೆಯಲ್ಲಿ ಆಟೋ, ಕ್ರೂಸರ್ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ ಮತ್ತೋರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುತ್ತಿದ್ದಂತ ವೇಳೆಯಲ್ಲಿ ಸಾವನ್ನಪ್ಪಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶೆಳ್ಳಿಗಿ ಕ್ರಾಸ್ ಬಳಿಯಲ್ಲಿ ಆಟೋ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ತಾಲೂಕಿನ ದೇವಾಪುರ ಗ್ರಾಮದ ಬುಡ್ಡಪ್ಪ ತಳವಾರ್, ದೇವಪ್ಪ ಚಿಂಚೋಡಿ ಮೃತಪಟ್ಟಿದ್ದು, ಇನ್ನುಳಿದ ವ್ಯಕ್ತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಆಸ್ಪತ್ರೆಗೆ ಕರೆದೋಯ್ಯುವ ಮಾರ್ಗ ಮಧ್ಯದಲ್ಲಿ ರಾಚಯ್ಯ ಸ್ವಾಮಿ ಅಸುನಿಗಿದ್ದಾನೆ.
ಇನ್ನು ಘಟನೆಯಲ್ಲಿ ಕ್ರೂಸರ್ ಹಾಗೂ ಆಟೋದಲ್ಲಿದ್ದ ಬೇರೆಯವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಪರಶುರಾಮ, ಸುರಪುರ, ಯಾದಗಿರಿ
ನಾಲ್ವರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ, 67 ಸಾಧಕರಿಗೆ ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಪ್ರದಾನ
BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ : ‘BMRCL’ ಮಹತ್ವದ ಪ್ರಕಟಣೆ.!