ರಾಯಚೂರು: ಜಿಲ್ಲೆಯಲ್ಲಿ ಹನುಮ ಮಾಲಾಧಾರಿಗಳಿಗೆ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ರಾಯಚೂರಿನ ಶಕ್ತಿ ನಗರದಲ್ಲಿನ ಯಾದವ ನಗರದ ಕ್ರಾಸ್ ಬಳಿಯಲ್ಲಿ ಹನುಮ ಮಾಲಾಧಾರಿಗಳು ಹನುಮ ಜಯಂತಿಯ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ತೆರಳಿದ್ದರು. ಬೆಳಗಿನ ಜಾವ 5 ಗಂಟೆಯ ವೇಳೆಯಲ್ಲಿ ಹನುಮ ಮಾಲಾಧಾರಿಗಳಿಗೆ ಯಮ ಸ್ವರೂಪಿಯಾಗಿ ಬಂದಂತ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅಯ್ಯನಗೌಡ(28), ಮಹೇಶ್ (22) ಹಾಗೂ ಉದ ಕುಮಾರ(28) ಎಂಬುದಾಗಿ ಗುರುತಿಸಲಾಗಿದೆ. ರಮೇಶ ಭೂಷಣ ಸೇರಿದಂತೆ ಇಬ್ಬರು ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
BREAKING: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ | K P Nanjundi Resigns
2024-25ರಲ್ಲಿ ಐದು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಯಲಿದೆ ಚಿಲ್ಲರೆ ಹಣದುಬ್ಬರ : `CMIE’ ವರದಿ