ಮಹಾರಾಷ್ಟ್ರ: ಬೆಳಗಾವಿ ಜಿಲ್ಲೆಯ ಒಂದೇ ಕುಟುಂದ ಮೂವರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ದಸರಾ ರಜೆಯ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದಿಂದ 8 ಜನರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರತೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಬೆಳಗಾವಿ ಜಿಲ್ಲೆಯ ಆಳ್ನಾವರದಿಂದ ತೆರಳಿದ್ದಂತ 8 ಜನರಲ್ಲಿ ಮೂವರು ಸಮುದ್ರಪಾಲಾಗಿದ್ದಾರೆ. ಅವರ ಶವ ಪತ್ತೆಯಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಸಮುದ್ರದಲ್ಲಿ ಕಣ್ಮರೆಯಾಗಿರುವಂತ ಉಳಿದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಫರೀನ್ ಇರ್ಫಾನ್ ಕಿತ್ತೂರ(34), ಇಬಾದ್ ಕಿತ್ತೂರ(13) ಹಾಗೂ ಆಳ್ನಾವರದ ನಮೀರಾ ಅಕ್ತರಾ(16) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ನಿವಾಸಿಗಳಾಗಿದ್ದಾರೆ.