ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ ಸೇಬು ತುಂಬಿದ ಟ್ರಕ್ ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಬಂಧಿಸಲಾಗಿದೆ.
Himachal Pradesh | 3 passengers of a car were killed after an apple-laden truck overturned on it in Shimla's Chharabra Saturday morning. The driver of the truck suffered minor injuries & has been arrested pic.twitter.com/wOop3L7zqD
— ANI (@ANI) October 1, 2022
ಸಿಎಂ ಜೈರಾಮ್ ಠಾಕೂರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. “ಥಿಯೊಗ್-ಶಿಮ್ಲಾ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಸುದ್ದಿ ತುಂಬಾ ದುಃಖಕರವಾಗಿದೆ. ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬಗಳಿಗೆ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ, ಇದು ದೇವರಿಗೆ ನಮ್ಮ ಪ್ರಾರ್ಥನೆಯಾಗಿದೆ” ಎಂದು ಅವರು ಹೇಳಿದರು.