ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ನಿವಾಸಿಗಳಆದಂತ ಶ್ರೀಧರ ಮರಕಡ, ಜನಾರ್ಧನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದಂತ ಮತ್ತೋರ್ವ ವ್ಯಕ್ತಿ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರಿನಲ್ಲಿದ್ದವರು ಸಕಲೇಶಪುರಕ್ಕೆ ಮದುವೆಗೆ ಹೋಗಿ ಬರುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ
ಪಿಎಂ ಕಿಸಾನ್ 22ನೇ ಕಂತಿನ ಹಣ ಬಿಡುಗಡೆ: ನಿಮ್ಮ ಖಾತೆಗೆ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ








