ಬೆಂಗಳೂರು: ರಾಜ್ಯದಲ್ಲಿ ಮಂಗನಕಾಯಿಲೆ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿವೆ. ಇಂದು ಹೊಸದಾಗಿ ಮೂವರಿಗೆ ಮಂಗನಕಾಯಿಲೆ ದೃಢಪಟ್ಟಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಅಂಕಿ ಅಂಶದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 154 ಜನರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಮೂವರಿಗೆ ಸೋಂಕು ತಗುಲಿರೋದು ದೃಢಪಟ್ಟಿರೋದಾಗಿ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 33 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಲ್ಲಿ ಒಬ್ಬರಿಗೆ ಮಂಗನಕಾಯಿಲೆ ದೃಢಪಟ್ಟಿದೆ. ಚಿಕ್ಕಮಗಳೂರಲ್ಲಿ 8 ಜನರನ್ನು ಕಳೆದ 24 ಗಂಟೆಯಲ್ಲಿ ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ದೃಢಪಟ್ಟಿದೆ.
BREAKING: ‘ಭಾರತೀಯ ಪ್ರವಾಸಿಗ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಇರಾನ್’ಗೆ ಪ್ರಯಾಣಿಸಲು ‘ವೀಸಾ’ ಅಗತ್ಯವಿಲ್ಲ