ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸದ್ಯ ಈ ಘಟನೆಯ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.
ರಾಷ್ಟ್ರರಾಜಧಾನಿಯಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಸೆಲ್ಲರ್ ನಲ್ಲಿರುವ ಕೋಚಿಂಗ್ ಸೆಂಟರ್ ನ ಗ್ರಂಥಾಲಯಕ್ಕೆ ಭಾರಿ ಪ್ರವಾಹದ ನೀರು ನುಗ್ಗಿದೆ. ಈ ವೇಳೆ ವಿದ್ಯಾರ್ಥಿಗಳು ಅಲ್ಲೇ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲಂಗಾಣದ ಮಂಚೇರಿಯಲ್ ನಿವಾಸಿ ತಾನ್ಯಾ ಸೋನಿ (25), ಉತ್ತರ ಪ್ರದೇಶದ ಶ್ರೇಯಾ ಯಾದವ್ (25) ಮತ್ತು ಕೇರಳದ ನವೀನ್ ದಾಲ್ವಿನ್ (24) ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Three IAS aspirants killed in Delhi after coaching centre’s basement gets flooded amidst heavy rains.
I have said it before: Don’t blame the weather.
This is a man-made disaster. And until municipal officials are criminally prosecuted – it will keep happening. pic.twitter.com/doIFUkl7Ug
— Vishal Bhargava (@VishalBhargava5) July 28, 2024
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸಂಪೂರ್ಣ ವಿವರಗಳನ್ನು ಖಚಿತಪಡಿಸಿಕೊಳ್ಳಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.ಘಟನೆಯ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಟಡಿ ಸರ್ಕಲ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ಸಂಯೋಜಕ ದೇಶ್ಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ.