ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದಂತಹ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯ ಅಪಘಾತ ಸಂಭವಿಸಿ ಮೂರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಎಂಬ ಗ್ರಾಮದಲ್ಲಿ ನಡೆದಿದೆ.
ಈ ಒಂದು ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ನಿತೀಶ್ (17) ನಿತಿನ್ (17) ವೈಭವ್ (16) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಟ್ಯೂಷನ್ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತಿಳುವಾಗ ಈ ಒಂದು ಅಪಘಾತ ಸಂಭವಿಸಿದೆ.
ಬಿವಿಎಸ್ ಶಾಲೆಯಲ್ಲಿ ನಿತೀಶ್ ಮತ್ತು ನಿತಿನ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇನ್ನೂ ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ನಿವಾಸಿಗಳು ಎಂದು ತಿಳಿದುಬಂದಿದೆ.ಘಟನೆ ಕುರಿತಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.