ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಮತ್ತು ಖನ್ಯಾರ್ನಲ್ಲಿ ಇಂದು ಮುಂಜಾನೆ ಪ್ರಾರಂಭವಾದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.
ಖನ್ಯಾರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಏತನ್ಮಧ್ಯೆ, ಅನಂತ್ನಾಗ್ನ ಹಲ್ಕಾನ್ ಗಲಿ ಪ್ರದೇಶದಲ್ಲಿ ಭದ್ರತಾ ಪಡೆ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನ ಪ್ರಾರಂಭಿಸಿತು ಮತ್ತು ಇಬ್ಬರು ಭಯೋತ್ಪಾದಕರನ್ನ ಹೊಡೆದುರುಳಿಸಲಾಗಿದೆ. ಖನ್ಯಾರ್ನಲ್ಲಿ ಹತ್ಯೆಗೀಡಾದ ಭಯೋತ್ಪಾದಕನನ್ನು ಉಸ್ಮಾನ್ ಅಲಿಯಾಸ್ ಚೋಟಾ ವಾಲಿದ್ ಎಂದು ಗುರುತಿಸಲಾಗಿದ್ದು, ಪಾಕಿಸ್ತಾನದ ಲಷ್ಕರ್ನ ಉನ್ನತ ಕಮಾಂಡರ್ ಆಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ಒಂದು ದಿನದ ಹಿಂದೆ ಇಬ್ಬರು ವಲಸೆ ಕಾರ್ಮಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳು ನಡೆದಿವೆ. ಉತ್ತರ ಪ್ರದೇಶದ ಇಬ್ಬರು ಪುರುಷರ ಮೇಲೆ ಬುಡ್ಗಾಮ್ ಜಿಲ್ಲೆಯಲ್ಲಿ ಗುಂಡು ಹಾರಿಸಲಾಗಿದ್ದು, ಕಳೆದ ಎರಡು ವಾರಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ವಲಸಿಗರ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ.
ಕೇರಳದಲ್ಲಿ ಘೋರ ದುರಂತ ; ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ‘ಪೌರ ಕಾರ್ಮಿಕರು’ ದುರ್ಮರಣ
ಬೈಸಿಕಲ್ ಸ್ಟಂಟ್ ಮಾಡುವಾಗ ಗೋಡೆಗೆ ಡಿಕ್ಕಿ ಹೊಡೆದು ಬಾಲಕ ಸಾವು! ಆಘಾತಕಾರಿ ವೀಡಿಯೊ ವೈರಲ್
BREAKING : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ’ ಯೋಜನೆ ನಿಲ್ಲಲ್ಲ : ವಕ್ಫ್ ಸಚಿವ ಜಮೀರ್ ಅಹ್ಮದ್ ಹೇಳಿಕೆ