ಬೆಂಗಳೂರು : ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ.
ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ ಎಂಟು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಮೃತರು ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿಗಳು ಎಂದು ತಿಳಿದುಬಂದಿದೆ ಕಾಶಿ ಪ್ರವಾಸಕ್ಕೆ ಸ್ತ್ರೀಶಕ್ತಿ ಸಂಘದ ಮಹಿಳೆಯರು ತೆರಳುತ್ತಿದ್ದರು. ಕಾಶಿ ಅಯೋಧ್ಯ ಪ್ರವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿಪಟೂರಿನಿಂದ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಮಧ್ಯರಾತ್ರಿ ಅಪಘಾತ ಸಂಭವಿಸಿದೆ ಹೊಸಕೋಟೆಯಿಂದ ದಾಬಸ್ಪೇಟಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಅಪಘಾತ ಸಂಭವಿಸಿದ್ದು, ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕ್ಯಾಂಟರ್ ಗೆ ಗೂಡ್ಸ್ ಡಿಕ್ಕಿಯಾಗಿ ಮೂವರು ಸಾವು!
ಇನ್ನು ಮತ್ತೊಂದು ಘಟನೆಯಲ್ಲಿ ಕ್ಯಾಂಟರ್ ಗೆ ಗೂಡ್ಸ್ ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ. ಬೆಂಗಳೂರಿನ ಮೆಡಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮದ್ರಾಸ್ ರಸ್ತೆಯ ಮೇಳಹಳ್ಳಿ ಬ್ರಿಡ್ಜ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಲಾರಿಗೆ ಹಿಂದಿನಿಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮೂವರು ಸಾವನಪ್ಪಿದ್ದು, ಆಟೋದಲ್ಲಿ ಇದ್ದಂತಹ ಮೂವರ ಸ್ಥಿತಿ ಇದೀಗ ಗಂಭೀರವಾಗಿದೆ. ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








