ಶಿವಮೊಗ್ಗ : ಸಿದ್ದರಾಮಯ್ಯ ಅವರ ಎದೆ ಬಗೆದು ನೋಡಿದರೆ ಬಸವಣ್ಣ ಕಾಣೋದಿಲ್ಲ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಕಾಣುತ್ತಾರೆ. ಸಚಿವ ಸಂಪುಟ ವಿಸ್ತರಣೆ ಮೂಲಕ ಭಯ ಹುಟ್ಟಿಸುತ್ತಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಿಎಂ ಸಿದ್ದರಾಮಯ್ಯ ಭಯ ಹುಟ್ಟಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿಮ್ಮನ್ನು ತೆಗೆಯುತ್ತೇವೆ ತೆಗೆಯುತ್ತೇವೆ ಅಂತ ಎಚ್ಚರಿಕೆ ಕೊಡುತ್ತಿದ್ದಾರೆ. ಪದೇ ಪದೇ ಈ ರೀತಿ ಹೇಳಿಕೆ ನೀಡಿ, ಹುಷಾರ್ ನಮ್ಮ ಜೊತೆ ಇರಬೇಕು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಿಎಂ ಸಿದ್ದರಾಮಯ ಎಚ್ಚರಿಕೆ ಕೊಡುತ್ತಿದ್ದಾರೆ ಇವೆಲ್ಲವನ್ನು ನೋಡಿದರೆ ಈ ಸರ್ಕಾರ ಇರುತ್ತಾ ಅಥವಾ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದರು.