ಬೆಂಗಳೂರು: ರಾಜ್ಯದಲ್ಲಿ ನಡುವೆಯೇ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಕಟ್ಟಡ ಕಾರ್ಮಿಕರೇ ಗಮನಿಸಿ : ಡಿ.1ರಿಂದ ‘ಬೆಂಗಳೂರು ಒನ್ ಕೇಂದ್ರ’ಗಳಲ್ಲಿ ಮಾತ್ರ ‘BMTC ಪಾಸ್’ ವಿತರಣೆ
ಇಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಇದರಲ್ಲಿ ಉತ್ತರ ಒಳನಾಡನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.