ಚಾಮರಾಜನಗರ : ಚಾಮರಾಜನಗರದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ರೈತರೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬಂಡೀಪುರ ಕಾಂಡಚಿನ ಗ್ರಾಮ ಚೌಡಹಳ್ಳಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಹುಲಿ ಎರಗಿದೆ. ಅದೃಷ್ಡವಶಾತ್ ಕೂದಲೆಳೆ ಅಂತರದಲ್ಲಿ ರೈತ ಹುಲಿಯಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಎಂಬುವವರ ಮೇಲೆ ಹುಲಿ ಎರಗಿದೆ. ನಿನ್ನೆ ಗ್ರಾಮದ ಬಳಿ ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಹುಲಿ ಇಂದು ರೈತ ನಾಗರಾಜ್ ಮೇಲೆ ಎರಗಿದೆ.
ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
BREAKING NEWS : ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಆಪರೇಷನ್ ,ಕನ್ನಡಕ ವಿತರಣೆ : ಸಿಎಂ ಬೊಮ್ಮಾಯಿ ಘೋಷಣೆ
ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್, ಕನ್ನಡಕ ವಿತರಣೆ