ಶಿವಮೊಗ್ಗ: ಜಿಲ್ಲೆಯಲ್ಲಿ ಡಿ.31ರ ಇಂದು ರಾತ್ರಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ ಎಲ್ಲೆಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇಂದು ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಹೋಂ ಸ್ಟೇ, ಹೋಟೆಲ್ ಮಾಲೀಕರ ಜೊತೆಗೆ ಎಸ್ಪಿ ಮಿಥುನ್ ಕುಮಾರ್ ಸಭೆ ನಡೆಸಿದರು. ಈ ಸಭೆಯಲ್ಲಿ ಯಾವೆಲ್ಲ ನಿಯಮ ಅನುಸರಿಸಬೇಕೆಂದು ಮಾಲೀಕರಿಗೆ ಸೂಚನೆಯನ್ನು ನೀಡಿದರು.
ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಲಾಗಿದೆ. ಹೋಟೆಲ್ ಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಜನಸಂದಣೆ ಇರುವ ಕಡೆ ಸಿಸಿ ಕ್ಯಾಮರಾ ಅಳವಡಿಸಿ. ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.
ಮಧ್ಯರಾತ್ರಿ 1 ಗಂಟೆಯವರೆಗೆ ಹೊಸ ವರ್ಷಾಚರಣೆಗೆ ಅವಕಾಶವಿದೆ. ಮಧ್ಯ ರಾತ್ರಿ 2 ಗಂಟೆಯವರೆಗೆ ಪೊಲೀಸರ ಗಸ್ತು ವ್ಯವಸ್ಥೆ ಮಾಡಲಾಗಿದೆ. ಜನರಿಗೆ ತೊಂದರೆ ಕೊಡುವವ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು.
ಬೆಳಗಾವಿ ಕಲಾಪದ ವೇಳೆ ಬಂಧನ ಕೇಸ್: ಡಿಜಿ ಅಂಡ್ ಐಜಿಪಿಗೆ ಎಂಎಲ್ಸಿ ಸಿ.ಟಿ ರವಿ ದೂರು
ALERT : `iOS’ ಡಿವೈಸ್ ಗಳು` ಹ್ಯಾಕಿಂಗ್‌ಗೆ ಹೆಚ್ಚು ಗುರಿಯಾಗುತ್ತವೆ : ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!