ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ನಲ್ಲಿ ನಡೆಸಲು ಬೀದರ್ ಪತ್ರಕರ್ತರ ಭವನದಲ್ಲಿ ರಾಜ್ಯ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಜಿಲ್ಲಾ ಕಾರ್ಯನಿರತ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ.
ರಾಜ್ಯ ಸಮ್ಮೇಳನದ ಜವಾಬ್ದಾರಿ ಹೊತ್ತ ಬೀದರ್ ಜಿಲ್ಲಾ ಸಂಘಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಅಭಿನಂದನೆಗಳನ್ನು ಸಲ್ಲಿಸಿದೆ.
ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಸಮ್ಮೇಳನ ಆಯೋಜನೆ ಮಾಡಲಾಗುವುದು ಎಂದು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ ಅವರು ತಿಳಿಸಿದ್ದಾರೆ.
ಶಿವಮೊಗ್ಗ: ಸಾಗರದಲ್ಲಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ‘ಪಶು ವೈದ್ಯ ಡಾ.ಸುನೀಲ್’ ಸಾವು
ಈಗ ಗ್ರಾಮ ಪಂಚಾಯ್ತಿಯಲ್ಲೇ ದೊರೆಯಲಿದೆ ’11ಇ ನಕ್ಷೆ’ ಸೇರಿದಂತೆ ಈ ಭೂ ದಾಖಲೆಗಳು: ಇಷ್ಟು ಶುಲ್ಕ ನಿಗದಿ








