ಧಾರವಾಡ: ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯಲ್ಲಿ ಡಿ.8ರಿಂದ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಸುವ ಕುರಿತು ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿ ಜತೆ ಸಭೆ ನಡೆಸಲಿದ್ದೇವೆ. ಸಿಎಂ ಸಿದ್ದರಾಮಯ್ಯ ಜತೆಗೆ ಈ ವಿಚಾರವಾಗಿ ಈಗಾಗಲೇ ಚರ್ಚೆ ಮಾಡಿದ್ದೇನೆ. ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದರು.
ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಆದರೆ, ದಕ್ಷಿಣ ಕರ್ನಾಟಕದವರು ಮಾತನಾಡುತ್ತಾರೆ. ಪ್ರತಿ ಬುಧವಾರ, ಗುರುವಾರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡಲು ಸಮಯ ನಿಗದಿ ಮಾಡಲಾಗಿದೆ. ಆದರೂ ಯಾವೊಬ್ಬ ಶಾಸಕರೂ ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದಿಲ್ಲ. ಈ ಭಾರಿ ಉತ್ತರ ಕರ್ನಾಟಕದ ಚರ್ಚೆ ಬಗ್ಗೆ ನಿರ್ಲಕ್ಷ್ಯಆಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.








