ಮಂಡ್ಯ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ಕೊಡುವ ಕಾಲ ಬಂದಿದೆ. ಕುಮಾರಸ್ವಾಮಿ ಏನು ಸಾಚಾ ಅಲ್ಲಾ. ಕುಮಾರಸ್ವಾಮಿ, ಪ್ರಜ್ವಲ್ ರೀತಿ ಪರಿಸ್ಥಿತಿ ಎದುರಿಸಲಿದ್ದಾರೆ. ಇಷ್ಟು ದಿನ ಯಾರು ಬಂದು ದೂರು ಕೊಡಲು ಧೈರ್ಯ ಮಾಡಿರಲಿಲ್ಲ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೀವಿ. ರಾಧಿಕಾ ಅವ್ರನ್ನ ಪತ್ನಿ ರೀತಿ ಕಾಣುತ್ತಿದ್ದಾರ? ಈ ರೀತಿ ಬಹಳಷ್ಟು ನಡೆದಿರಬಹುದು. ವರ ಆಪ್ತರೆ ಹಲವಾರು ಬಾರಿ ಹೇಳಿದ್ದಾರೆ.
ಕುಮಾರಸ್ವಾಮಿ ಏನು ಸಾಚಾ ಅಲ್ಲ ಎಂದು ಕಿಡಿಕಾರಿದ್ದಾರೆ.
ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ. ಪೆನ್‌ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ.ಮುಂದಿನ ದಿನಗಳಲ್ಲಿ ರೇವಣ್ಣನಿಗೆ ಆಗಿರುವ ಪರಿಸ್ಥಿತಿ ಕುಮಾರಸ್ವಾಮಿಗೂ ಬರಬಹುದು. ಕುಮಾರಸ್ವಾಮಿಗೆ ಎರಡು ನಾಲಿಗೆ ಎಂಬುದು ಸಾಬೀತಾಗಿದೆ. ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ.
ಕುಮಾರಸ್ವಾಮಿ ಏನು ಸಾಚ ಅಲ್ಲ. ಮುಂದೆ ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.