ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಮಯ ದೂರವಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ. ನಿಮ್ಮ ಕನಸುಗಳನ್ನು ನಿಮ್ಮ ಶಾಸಕರು ಮತ್ತು ನಿಮ್ಮ ಮಂತ್ರಿಗಳೊಂದಿಗೆ ಹಂಚಿಕೊಳ್ಳಲು ನಿಮಗೆ ಸಾಧ್ಯವಾಗುತ್ತದೆ ಅಂತ ಹೇಳಿದರು.
ಇದೇ ವೇಳೇ ಅವರು ಮಾತನಾಡಿ “ದಯವಿಟ್ಟು ನನ್ನನ್ನು ನಂಬಿ, ಕಳೆದ 60 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರವನ್ನು ಕಾಡುತ್ತಿರುವ ಸಮಸ್ಯೆಗಳನ್ನು ನಾನು ತೊಡೆದುಹಾಕುತ್ತೇನೆ. ಕಳೆದ 10 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರವು ಸಂಪೂರ್ಣವಾಗಿ ರೂಪಾಂತರಗೊಂಡಿರುವುದರಿಂದ ನಾನು ನನ್ನ ಭರವಸೆಯನ್ನು ಈಡೇರಿಸಿದ್ದೇನೆ” ಎಂದು ಅವರು ಹೇಳಿದರು.