ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಎಸ್ಐ ಒಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಆಲ್ದೂರು ಪೊಲೀಸ್ ಠಾಣೆಯ ಎಎಸ್ಐ ಶಿವಕುಮಾರ್ ವಿರುದ್ಧ ಖಾಲಿದ್ ಹುಸೇನ್ ಎಂಬಾತ ಕಿರುಕುಳ ಆರೋಪ ಮಾಡಿದ್ದಾರೆ. ಎಸ್ಎಐ ಶಿವಕುಮಾರ್ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಎಸ್ ಪಿ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆಲ್ದೂರು ಪಟ್ಟಣದ ಖಾಲಿದ್ ಹುಸೇನ್ ಎಂಬಾತ ಚಿಕ್ಕಮಗಳೂರಿನ ಎಸ್ ಪಿ ಕಚೇರಿ ಎದುರೇ ಡೆತ್ ನೋಟ್ ಹಿಡಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಸ್ಥಳದಲ್ಲಿದ್ದಂತ ಪೊಲೀಸರು ಆತನನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು
UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ