ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

ಬಳ್ಳಾರಿ: ಅಧಿಕಾರಿಗಳ ಸತತ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ. ಘಟನೆಯ ವಿವರ: ಕೃಷಿ ಇಲಾಖೆಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಬಿ.ಎನ್. ರಾಜು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಗೌರಿಪುರ ಗ್ರಾಮದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಆತ್ಮಹತ್ಯೆಗೂ ಮುನ್ನ ರಾಜು ಅವರು ಮೂರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಅಧಿಕಾರಿಗಳ ಕಿರುಕುಳದ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ ಎನ್ನಲಾಗಿದೆ. … Continue reading ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ