ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸ್ವಕ್ಷೇತ್ರ ವರುಣಾದಲ್ಲಿ ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ತಮ್ಮ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.
ಮೈಸೂರು ತಾಲ್ಲೂಕಿನ ವರುಣಾ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ದಿವ್ಯಾ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದಂತವರು ಆಗಿದ್ದಾರೆ. ವರ್ಗಾವಣೆ ವಿಚಾರಕ್ಕೆ ದಿವ್ಯಾ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದರಂತೆ. ಈ ಕಾರಣದಿಂದಾಗಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವರುಣಾ ಗ್ರಾಮ ಪಂಚಾಯ್ತಿಯ ಕಾರ್ಯದರ್ಶಿ ದಿವ್ಯ ವರ್ಗಾವಣೆಯಿಂದಾಗಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿದ್ದಂತ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
CRIME NEWS: ಕರ್ನಾಟಕದಿಂದ ಕಳ್ಳಸಾಗಾಣೆಗೆ ಯತ್ನಿಸಿದ 3.15 ಕೋಟಿ ನಗದು ವಶಕ್ಕೆ
ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes








