ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಬಲಿಯಾದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗುರುವಾರ ಪ್ರಕಟಿಸಿದ್ದಾರೆ. ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ವಿಫಲವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವ ಮೂಲಕ ಸಿಎಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ತಿರುಪತಿಯ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ ಎಂದು ಸಿಎಂ ನಾಯ್ಡು ಕಾಲ್ತುಳಿತದ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸುಗಮ ಕಾರ್ಯಾಚರಣೆ ನಡೆಸಲು ವಿಫಲರಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ತಿರುಪತಿ ಎಸ್ಪಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಇನ್ನೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು.
ಘಟನೆಯಿಂದ ತನಗೆ ನೋವಾಗಿದೆ ಎಂದು ಹೇಳಿದ ಆಂಧ್ರ ಸಿಎಂ, ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದರು.
33 ಮಂದಿ ಗಾಯಗೊಂಡಿದ್ದಾರೆ. ಅವರಿಗೆ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ಹೇಳಿದರು.
ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಂ ಟಿಕೆಟ್ ಗಾಗಿ ನೂರಾರು ಜನರು ಮುಗಿಬಿದ್ದಿದ್ದರಿಂದ ಕಾಲ್ತುಳಿತದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಜನವರಿ 10 ರಿಂದ ಪ್ರಾರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಂಗೆ ದೇಶಾದ್ಯಂತ ನೂರಾರು ಭಕ್ತರು ಆಗಮಿಸಿದ್ದರು.
ಚಿತ್ರದುರ್ಗ: ವಿವಿ ಸಾಗರ ಜಲಾಶಯ ಭರ್ತಿ, ಸಾರ್ವಜನಿಕರು ಈ ಮುನ್ನೆಚ್ಚರಿಕೆ ವಹಿಸಲು ಸೂಚನೆ
ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ