ಬೆಂಗಳೂರು: ತಾಯಿ ಗರ್ಭದಲ್ಲಿದ್ದಾಗಲೇ ಮಗುವಿಗೆ ಪೌಷ್ಟಿಕಾಂಶವನ್ನು ನೀಡುವ ಮೂಲಕ ಶಿಶು ಮರಣ ಪ್ರಮಾಣ ದರ ಒಂದಂಕಿಗೆ ಕಡಿಮೆ ಮಾಡುವ ಗುರಿ ಹೊಂದಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ರೈನ್ ಬೋ ಮಕ್ಕಳ ಆಸ್ಪತ್ರೆ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಆಯೋಜಿಸಿದ್ದ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸದ್ಯ ರಾಜ್ದಲ್ಲಿ ನವಜಾತ ಶಿಶುಗಳ ಮರಣ ದರ (ಐಎಂಆರ್) ಎರಡಂಕಿಯಷ್ಟಿದೆ. ಆ ಪ್ರಮಾಣವನ್ನು ಒಂದಂಕಿಗೆ (10ಕ್ಕಿಂತ ಕಡಿಮೆ) ಇಳಿಸಬೇಕಿದೆ.
ಶಿಶುಗಳ ಮರಣಕ್ಕೆ ಅಪೌಷ್ಟಿಕತೆಯೇ ಪ್ರಮುಖ ಕಾರಣ. ಈ ಸಮಸ್ಯೆಗಳು ಪರಿಹಾರವಾಗಬೇಕೆಂದರೆ, ಗರ್ಭದಲ್ಲಿಯೇ ಮಗುವಿಗೆ ಪೌಷ್ಟಿಕಾಂಶ ದೊರೆಯಬೇಕು. ಮುಖ್ಯವಾಗಿ ತೀವ್ರ ಅಪೌಷ್ಟಿಕತೆಯುಳ್ಳ ಮಕ್ಕಳಿಗೆ ನೀಡುವ ಆಹಾರವನ್ನೇ ಸಾಮಾನ್ಯ ಅಪೌಷ್ಟಿಕತೆಯುಳ್ಳ ಮಕ್ಕಳಿಗೂ ನೀಡಲಾಗುತ್ತದೆ ಎಂದು ತಿಳಿಸಿದರು.
Shocking Video: ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ… ನೆಟ್ಟಿಗರಿಂದ ಆಕ್ರೋಶ
Big news: ಇಂದು ಬೆಳಗ್ಗೆ 10 ಗಂಟೆಯಿಂದ ರಾಷ್ಟ್ರಪತಿ ಚುನಾವಣೆ; ಭಾರೀ ಗೆಲುವಿನ ನಿರೀಕ್ಷೆಯಲ್ಲಿ ದ್ರೌಪದಿ ಮುರ್ಮು