ಬೆಂಗಳೂರು: ಬಿಎಂಆರ್‌ಸಿಎಲ್, ದಿನಾಂಕ 19.01.2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದು, ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಇರುವುದಿಲ್ಲ.
ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ, ಮೇಲಿನ ಅವಧಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭವಾಗುತ್ತವೆ.
ಹಸಿರು ಮಾರ್ಗದ ರೈಲು ಸಮಯಗಳಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಮತ್ತು ಎಂದಿನಂತೆ ಮೆಟ್ರೋ ರೈಲುಗಳ ಸೇವೆ ಇರಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಮೇಲಿನ ಬದಲಾವಣೆಯನ್ನು ಗಮನಿಸ ಬೇಕೆಂದು ಕೋರಿದೆ. ಸಾರ್ವಜನಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.
BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat