ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಿಶಾಖಪಟ್ಟಣಂ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ.
ವಿಶಾಖಪಟ್ಟಣಂ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ (ರೈ.ಸಂ.08543/08544) ರೈಲುಗಳ ಸೇವೆಯನ್ನು ಈಗಿರುವ ಸಮಯ ಮತ್ತು ನಿಲುಗಡೆಗಳೊಂದಿಗೆ ವಿಸ್ತರಿಸಲು ಪೂರ್ವ ಕರಾವಳಿ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ.
- ವಿಶಾಖಪಟ್ಟಣಂ ನಿಲ್ದಾಣದಿಂದ ಪ್ರತಿ ಭಾನುವಾರ ಚಲಿಸುತ್ತಿರುವ ರೈಲು ಸಂಖ್ಯೆ 08543 ವಿಶಾಖಪಟ್ಟಣಂ– ಎಸ್ಎಂವಿಟಿ ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಆಗಸ್ಟ್ 18 ರಿಂದ ನವೆಂಬರ್ 24, 2024 ರವರೆಗೆ (15 ಟ್ರಿಪ್) ಮುಂದುವರಿಸಲಾಗಿದೆ. ಈ ಮೊದಲು ಜೂನ್ 30, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.
- ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರತಿ ಸೋಮವಾರ ಹೊರಡುವ ರೈಲು ಸಂಖ್ಯೆ 08544 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಶಾಖಪಟ್ಟಣಂ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಆಗಸ್ಟ್ 19 ರಿಂದ ನವೆಂಬರ್ 25, 2024 ರವರೆಗೆ (15 ಟ್ರಿಪ್) ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂಲೈ 1, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.
ಪಡನೂರ ಹಾಲ್ಟ್‌ನಲ್ಲಿ ಪ್ರಾಯೋಗಿಕ ನಿಲುಗಡೆ ಮುಂದುವರಿಕೆ
1. ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ – ಸೋಲಾಪುರ ನಿಲ್ದಾಣಗಳ ನಡುವೆ ದೈನಂದಿನ ಸಂಚರಿಸುವ ಪ್ಯಾಸೆಂಜರ್ ಸ್ಪೆಷಲ್ (ರೈ.ಸಂ.07331/07332) ರೈಲುಗಳನ್ನು ಪಡನೂರ ಹಾಲ್ಟ್ ನಿಲ್ದಾಣದಲ್ಲಿ ಒಂದು ನಿಮಿಷದ ಪ್ರಾಯೋಗಿಕ ನಿಲುಗಡೆಯನ್ನು ಇನ್ನೂ ಮೂರೂ ತಿಂಗಳ ಕಾಲ ಅಂದರೆ ನವೆಂಬರ್ 11, 2024 ರವರೆಗೆ, ಅಸ್ತಿತ್ವದಲ್ಲಿರುವ ವೇಳಾಪಟ್ಟಿಯೊಂದಿಗೆ ಮುಂದುವರಿಸಲಾಗುತ್ತಿದೆ.
BREAKING: ರಾಜ್ಯ ಸರ್ಕಾರದಿಂದ ಕೂಡಲೇ SBI, PNB ಬ್ಯಾಂಕ್ ಖಾತೆ ಮುಚ್ಚುವಂತೆ ಎಲ್ಲಾ ಇಲಾಖೆಗಳಿಗೆ ಆದೇಶ
BIG NEWS: ಬೆಂಗಳೂರಲ್ಲಿ ವಿಧಾನಸೌಧದ ಮುಂದೆ ಬೆಚ್ಚಿ ಬೀಳಿಸೋ ಘಟನೆ: ಬೈಕ್ ಗೆ ಬೆಂಕಿಯಿಟ್ಟ ಮಾಲೀಕ