ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೈಯಪ್ಪನಹಳ್ಳಿ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲುಗಳನ್ನು ಕೆಳಗೆ ತಿಳಿಸಿದಂತೆ ಭಾಗಶಃ ರದ್ದು/ ಮಾರ್ಗಬದಲಾವಣೆ/ ಸಮಯ ಬದಲಾವಣೆ /ನಿಯಂತ್ರಣ ಮಾಡಲಾಗುವುದು:
ರೈಲುಗಳ ಭಾಗಶಃ ರದ್ದತಿ:
- 02.04.2025 ಮತ್ತು 06.04.2025 ರಂದು ಹೊರಡುವ ರೈಲು ಸಂಖ್ಯೆ 07339 ಎಸ್.ಎಸ್.ಎಸ್ ಹುಬ್ಬಳ್ಳಿ- ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಯಶವಂತಪುರ ಮತ್ತು ಕೆ.ಎಸ್.ಆರ್. ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
- 03.04.2025 ಮತ್ತು 07.04.2025 ರಂದು ಹೊರಡುವ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು- ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ವಿಶೇಷ ರೈಲು ಕೆಎಸ್‌ಆರ್ ಬೆಂಗಳೂರಿನ ಬದಲಿಗೆ ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.
- 03.04.2025 ಮತ್ತು 07.04.2025 ರಂದು ಹೊರಡುವ ರೈಲು ಸಂಖ್ಯೆ 16521 ಬಂಗಾರಪೇಟೆ- ಕೆಎಸ್ಆರ್ ಬೆಂಗಳೂರು ಮೆಮು ರೈಲು ಬೈಯ್ಯಪ್ಪನಹಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
- ದಿನಾಂಕ 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 56520 ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್ ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
- ದಿನಾಂಕ 04.04.2025 ಮತ್ತು 08.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರಿನ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.
ರೈಲುಗಳ ಮಾರ್ಗ ಬದಲಾವಣೆ:
- 02.04.2025 ಮತ್ತು 06.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್- ಕೊಯಮತ್ತೂರು ಎಕ್ಸ್‌ಪ್ರೆಸ್ ಗೌರಿಬಿದನೂರು, ಯಲಹಂಕ, ಲೊಟ್ಟೆಗೊಲ್ಲಹಳ್ಳಿ, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಹೆಬ್ಬಾಳ, ಬಾಣಸವಾಡಿ, ಕಾರ್ಮೆಲ್ರಾಮ್ ಮತ್ತು ಹೊಸೂರು ಮಾರ್ಗವಾಗಿ ಸಂಚರಿಸಲಿದ್ದು, ಬೆಂಗಳೂರು ಕಂಟೋನ್ಮೆಂಟ್, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್‌ಗಳಲ್ಲಿ ನಿಲುಗಡೆಗಳನ್ನು ರದ್ದುಗೊಳಿಸಿ ಯಶವಂತಪುರದಲ್ಲಿ ಹೆಚ್ಚುವರಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ.( ಯಶವಂತಪುರದಲ್ಲಿ ಆಗಮನ 09.20 PM ನಿರ್ಗಮನ 09.40PM)
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು- ನಾಂದೇಡ್ ಎಕ್ಸ್‌ಪ್ರೆಸ್, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 06270 ಎಸ್.ಎಂ.ವಿ.ಟಿ ಬೆಂಗಳೂರು-ಮೈಸೂರು ಪ್ಯಾಸೆಂಜರ್, ಎಸ್.ಎಂ.ವಿ.ಟಿ ಬೆಂಗಳೂರು, ಬಾಣಸವಾಡಿ, ಯಶವಂತಪುರ ಮತ್ತು ಕೆ.ಎಸ್. ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16022 ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಬಾಣಸವಾಡಿ, ಬೈಯ್ಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ರದ್ದುಗೊಳಿಸಲಾಗಿದೆ.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 06269 ಮೈಸೂರು-ಎಸ್‌ಎಂವಿಟಿ ಬೆಂಗಳೂರು ಪ್ಯಾಸೆಂಜರ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಬಾಣಸವಾಡಿ, ಎಸ್‌ಎಂವಿಟಿ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ರದ್ದುಗೊಳಿಸಲಾಗಿದೆ.
ರೈಲುಗಳ ಸಮಯ ಬದಲಾವಣೆ:
- ದಿನಾಂಕ 03.04.2025 ಮತ್ತು 07.04.2025ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 12658 ಕೆ.ಎಸ್.ಆರ್. ಬೆಂಗಳೂರು- ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್ ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು ನಿಲ್ದಾಣದಿಂದ 45 ನಿಮಿಷ ತಡವಾಗಿ ಹೊರಡಲಿದೆ.
- ದಿನಾಂಕ 03.04.2025 ಮತ್ತು 07.04.2025ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16593 ಕೆ.ಎಸ್.ಆರ್. ಬೆಂಗಳೂರು- ನಾಂದೇಡ್ ಎಕ್ಸ್ ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು ನಿಲ್ದಾಣದಿಂದ 75 ನಿಮಿಷ ತಡವಾಗಿ ಹೊರಡಲಿದೆ.
ರೈಲುಗಳ ನಿಯಂತ್ರಣ:
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16021 ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಮೈಸೂರು ಕಾವೇರಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16594 ನಾಂದೇಡ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 12657 ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
- 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
BREAKING: ‘ನಮ್ಮ ಮೆಟ್ರೋ’ ದರ ಹೆಚ್ಚಳ ಪ್ರಶ್ನಿಸಿ ಸಲ್ಲಿಸಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್
Good News: ದಕ್ಷಿಣ ಭಾರತದ ಅತಿ ದೊಡ್ಡ ‘ಅಂಗಾಂಗ ಮರು ಪಡೆಯುವ ಕೇಂದ್ರ’ ಬೆಂಗಳೂರಿನಲ್ಲಿ ಸ್ಥಾಪನೆ