ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮಸ್ಯೆ ಕುರಿತಂತೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. ಸಾರ್ವಜನಿಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಪಡೆಯಬಹುದು ಎಂಬುದಾಗಿ ಸುದ್ದಿ ಹರಿದಾಡುತ್ತಿತ್ತು. ಆದರೇ ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಗೆ ಮಾತ್ರ ಸೀಮಿತ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಸಹಾಯವಾಣಿ ಸಂಖ್ಯೆ 9480683972 ಯನ್ನು ಆರಂಭಿಸಲಾಗಿರುತ್ತದೆ ಎಂದಿದೆ.
ಮುಂದುವರಿದು, ಸದರಿ ದೂರವಾಣಿ ಸಂಖ್ಯೆಗೆ ಬಿಬಿಎಂಪಿಯ 28 ವಿಧಾನಸಭಾ ಕ್ಷೇತ್ರಗನ್ನು ಹೊರತುಪಡಿಸಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಕರೆಗಳು ಬರುತ್ತಿವೆ. ಬಿಬಿಎಂಪಿಯಿಂದ ಬಿಡುಗಡೆಗೊಳಿಸಿರುವ ಸಹಾಯವಾಣಿ ಸಂಖ್ಯೆಯು ಪಾಲಿಕೆ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮಾತ್ರ ಗ್ಯಾರಂಟಿ ಯೋಜನೆಗಳ ಬಗ್ಗೆ ಕಛೇರಿ ಸಮಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಹಾಯವಾಣಿ ಸಂಖ್ಯೆ 9480683972 ಗೆ ಸಂಪರ್ಕಿಸಬಹುದಾಗಿರುತ್ತದೆ ಎಂದು ಹೇಳಿದೆ.
ಸದರಿ ವಿಷಯವನ್ನು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಧ್ಯಮಗಳಲ್ಲಿ ಸ್ಪಷ್ಟೀಕರಣ ನೀಡಬೇಕಾಗಿ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಜಿ. ಕೃಷ್ಣಪ್ಪ ಕೋರಿದ್ದಾರೆ.
ಬೆಂಗಳೂರಲ್ಲಿ ‘POP ಗಣೇಶ’ ತಯಾರಿಕೆ ಗೋಡೌನ್ ಮೇಲೆ ‘BBMP ಅಧಿಕಾರಿ’ಗಳ ದಾಳಿ, ಸೀಜ್ | POP Ganesha
ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ಸೆ.14ರವರೆಗೆ ಶೇ.5ರ ರಿಯಾಯಿತಿ ವಿಸ್ತರಣೆ
ಬ್ಯಾಂಕ್ ಗ್ರಾಹಕರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ!Bank Holidays