ಬೆಂಗಳೂರು : ಸಾರ್ವಜನಿಕರೇ ನೀವು ಸ್ಥಳೀಯವಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಈ ಕೆಲಸ ಮಾಡಿ ಸಾಕು.
ಹೌದು,ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.
ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ . ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.
ನಿಮ್ಮ ಸಮಸ್ಯೆಗೆ ಹೀಗೆ ಪರಿಹಾರ ಸಿಗಲಿದೆ.!
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಪಟ್ಟಣದ ರಸ್ತೆಯನ್ನು ಜಲಧಾರೆ ಯೋಜನೆಯಡಿಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದಿದ್ದು, ಎರಡು ತಿಂಗಳಾದರೂ ಗುಂಡಿಗಳನ್ನು ಮುಚ್ಚದಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ತಕ್ಷಣವೇ ರಸ್ತೆಯಲ್ಲಿ ಅಗೆದಿರುವ ತಗ್ಗು-ಗುಂಡಿಗಳನ್ನು ಮುರಂ ಹಾಕಿಸಿ ಮುಚ್ಚಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ದೇವದುರ್ಗ ತಾಲ್ಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಪಟ್ಟಣದ ರಸ್ತೆಯನ್ನು ಜಲಧಾರೆ ಯೋಜನೆಯಡಿಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದಿದ್ದು, ಎರಡು ತಿಂಗಳಾದರೂ ಗುಂಡಿಗಳನ್ನು ಮುಚ್ಚದಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ… pic.twitter.com/nuopT533Hn
— DIPR Karnataka (@KarnatakaVarthe) November 24, 2025
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಬೆಂಗಳೂರಿನ ಜೆ.ಪಿ ನಗರದಲ್ಲಿರುವ ನಂಜುಂಡೇಶ್ವರ ಬಡಾವಣೆಯ ರಸ್ತೆಯು ಗುಂಡಿಗಳಿಂದ ಕೂಡಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದಾಗಿ ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ದೂರು ನೀಡಿರುತ್ತಾರೆ. ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ… pic.twitter.com/rUW8LYrKt8
— DIPR Karnataka (@KarnatakaVarthe) November 22, 2025
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ನಿವಾಸಿಗಳು ಮೂಲಭೂತ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ… pic.twitter.com/s0CtItDotQ
— DIPR Karnataka (@KarnatakaVarthe) November 22, 2025








