ಮೈಸೂರು : ತಂಬಾಕು ಬೆಳೆಗೆ ಉತ್ತಮ ಬೆಲೆ ನೀಡಲು ಖರೀದಿದಾರ ಕಂಪನಿಗಳು ಕೆಲ ದಿನ ಕಾಲಾವಕಾಶ ಕೇಳಿದ ಹಿನ್ನೆಲೆ ಅಲ್ಲಿಯವರೆಗೆ ರಾಜ್ಯಾದ್ಯಂತ ಮಾರುಕಟ್ಟೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೇಂದ್ರೀಯ ತಂಬಾಕು ಮಂಡಳಿ ಅಧಿಕಾರಿಗಳ ಸೂಚನೆಯಂತೆ ಕೆಲವು ದಿನಗಳವರೆಗೆ ರಾಜ್ಯಾದ್ಯಂತ ಮಾರುಕಟ್ಟೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಎಂದು ತಂಬಾಕು ಮಂಡಳಿ ಉಪಾಧ್ಯಕ್ಷ ಎಚ್.ಸಿ. ಬಸವರಾಜು ಮಾಹಿತಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಮುಖ್ಯಸ್ಥರೊಂದಿಗೆ ಚರ್ಚಿಸಿ ತಿಳಿಸಲು ಮೂರ್ನಾಲ್ಕು ದಿನ ಕಾಲಾವಕಾಶ ಕೇಳಿದ ಹಿನ್ನೆಲೆ ದೀಪಾವಳಿ ಹಬ್ಬದ ತನಕ ತಾತ್ಕಾಲಿಕವಾಗಿ ರಾಜ್ಯಾದ್ಯಂತ ತಂಬಾಕು ಹರಾಜು ಮಾರುಕಟ್ಟೆಪ್ರಕ್ರಿಯೆ ಸ್ಥಗಿತಗೊಳಿಸಲು ತೀರ್ಮಾನ ಕೈಗೊಳ್ಳಲಾಯಿತು ಎಂದಿದ್ದಾರೆ.
ರೈತರಿಗೆ ಇದರಿಂದ ಅನಾನುಕೂಲವಾದರೂ ಮುಂದಿನ ದಿನಗಳಲ್ಲಿ ಉತ್ತಮ ದರ ದೊರಕಿಸಿಕೊಡುವ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಂಬಾಕು ರೈತರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ : ರಾಜ್ಯದ 51 ಕಡೆ ‘CID’ ಅಧಿಕಾರಿಗಳ ಕಾರ್ಯಾಚರಣೆ ; 38 ಮಂದಿ ಶಿಕ್ಷಕರು ಅರೆಸ್ಟ್
ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ವೇಳಾಪಟ್ಟಿ