ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ.
ರಾಜ್ಯದಲ್ಲಿ ಇಂದು 39 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದ್ದು, ಬೆಂಗಳೂರಿನಲ್ಲಿ 27 ಜನರಿಗೆ ಸೋಂಕು ತಗುಲಿದೆ.
ಬೆಂಗಳೂರಿನಲ್ಲಿ ಡಿಸೆಂಬರ್ ತಿಂಗಳನಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳ ಸಂಖ್ಯೆ ವರದಿಯಾಗಿದ್ದು, ವಿದೇಶದಿಂದ ಬಂದ ಪ್ರಯಾಣಿಕರು ಸೇರಿದಂತೆ ಸದ್ಯ ಬೆಂಗಳೂರಿನಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 1,275 ಇದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 0.21 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆ ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿದ್ದು, BF.7 ವೈರಸ್ ಆತಂಕಕ್ಕೂ ಇಮ್ಮಡಿಗೊಂಡಿದೆ.
BIGG NEWS : ಸುವರ್ಣಸೌಧದಲ್ಲಿ ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಗೆ ಸಿಎಂ ಬೊಮ್ಮಾಯಿ ನಾಳೆ ಚಾಲನೆ